

ರಾಜ್ಯ ಮಟ್ಟದ ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ
ಅದಮ್ಯ ರಂಗ ಶಾಲೆ (ರಿ) ಮೈಸೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ರವರು ಡಾ// ದೇಜಗೌ ರವರ ಸಂಸ್ಮರಣೆ ಪ್ರಯುಕ್ತ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ತೋರಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃಧ್ಧಿಗೆ ಶ್ರಮಿಸುತ್ತಿರುವ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ನೀಡುವ ರಾಜ್ಯ ಮಟ್ಟದ ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿಗೆ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಹುಣಸೂರು ಇಲ್ಲಿನ ಕನ್ನಡ ಉಪನ್ಯಾಸಕರಾದ ನಂಜು0ಡ ಸ್ವಾಮಿ ಕೆ ರವರು ಭಾಜನರಾಗಿದ್ದಾರೆ. ಇವರಿಗೆ ದಿನಾಂಕ ೦೬.೦೯.೨೦೨೫ ರಂದು ಮೈಸೂರಿನ ಸಾಹಿತ್ಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.